ಕೆಪಿಸಿಸಿ ಕಚೇರಿಯಲ್ಲಿ ಉಪಚುನಾವಣೆ ಫಲಿತಾಂಶ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಅಭೂತಪೂರ್ವ ಗೆಲುವಿನ ಬಗ್ಗೆ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಮಾತನಾಡಿದರು.
ಈ ಉಪಚುನಾವಣೆ ಫಲಿತಾಂಶ, 2028ರ ಚುನಾವಣೆ ಫಲಿತಾಂಶಕ್ಕೆ ರಾಜ್ಯದ ಜನರ ಮುನ್ನುಡಿ: ಡಿಸಿಎಂ ಡಿಕೆ ಶಿವಕುಮಾರ್ ಆತ್ಮವಿಶ್ವಾಸ
“ಈ ಉಪಚುನಾವಣೆಗಳ ಫಲಿತಾಂಶದ ಬಗ್ಗೆ ಮಾಧ್ಯಮಗಳು ನಡೆಸಿದ್ದ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾಗುತ್ತವೆ ಎಂದು ನಿನ್ನೆಯೇ ಹೇಳಿದ್ದೆ. ಕೆಲವು ಕ್ಷೇತ್ರದ ಸೋಲು, ಗೆಲುವು ನನ್ನದೇ ಎಂದು ಹೇಳಿದ್ದೆ. ಮೂರು ಉಪಚುನಾವಣೆಗಳ ಫಲಿತಾಂಶ ಬಂದಿದೆ. ವಿರೋಧ ಪಕ್ಷಗಳು ಟೀಕೆ, ಅಪಪ್ರಚಾರ ಮಾಡುವುದು ನಿಲ್ಲಿಸಬೇಕು. ಭಾವನೆ ಮೇಲೆ ರಾಜಕಾರಣ ನಡೆಯೋದಿಲ್ಲ, ಬದುಕಿನ ಮೇಲಿನ ರಾಜಕಾರಣಕ್ಕೆ ಒತ್ತು ನೀಡುವಂತೆ ನಮ್ಮ ಜನರೇ ಸಂದೇಶ ನೀಡಿದ್ದಾರೆ” ಎಂದು ತಿಳಿಸಿದರು.
“ವಿರೋಧ ಪಕ್ಷಗಳ ನಾಯಕರು ಮುಖ್ಯಮಂತ್ರಿಗಳು, ಮಂತ್ರಿಗಳ ಮೇಲೆ ಸುಳ್ಳು ಆರೋಪ ಮಾಡುವುದನ್ನು ನಿಲ್ಲಿಸಬೇಕು. ಸತ್ಯಾಂಶವಿದ್ದರೆ ನಮ್ಮನ್ನು ತಿದ್ದುವ ಪ್ರಯತ್ನ ಮಾಡಲಿ. ಆದರೆ ಸುಳ್ಳನ್ನೇ ಮನೆ ದೇವರು ಎಂದು ಪರಿಗಣಿಸಿ ಜನರ ತಲೆಗೆ ತುಂಬಲು ಹೋದರೆ ಕೆಲಸಕ್ಕೆ ಬರುವುದಿಲ್ಲ. ಬೊಮ್ಮಾಯಿ ಅವರ ಕ್ಷೇತ್ರದಲ್ಲಿ 14 ಸಾವಿರ ಮತಗಳ ಅಂತರ ಬಂದಿದೆ. ಈ ಚುನಾವಣೆ ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಹಳೇ ಮೈಸೂರು ಭಾಗದಲ್ಲಿ ನಡೆದಿದೆ. ಈ ಭಾಗದಲ್ಲಿ ಆಯ್ಕೆಯಾದ ಕೇಂದ್ರ ಮಂತ್ರಿಗಳು ಎನ್ ಡಿಎ ಮೈತ್ರಿ ಹೆಸರಲ್ಲಿ ಚುನಾವಣೆ ಮಾಡಿದ್ದರು” ಎಂದರು.
ಈ ಫಲಿತಾಂಶ ದೇವೇಗೌಡ ಕುಟುಂಬದ ಕುಸಿತದ ಆರಂಭವೇ ಎಂದು ಕೇಳಿದಾಗ, “ನಾನು ಈ ಫಲಿತಾಂಶವನ್ನು ಈ ರೀತಿ ಬಣ್ಣಿಸುವುದಿಲ್ಲ. ಜನ ತೀರ್ಪು ಕೊಟ್ಟಿದ್ದಾರೆ. ಮಾಧ್ಯಮಗಳು ಹೇಗೆ ವ್ಯಾಖ್ಯಾನ ಮಾಡಬೇಕೋ ಮಾಡಿ” ಎಂದು ತಿಳಿಸಿದರು.
2028 ವಿಧಾನಸಭೆ ಚುನಾವಣೆ ಕೆಪಿಸಿಸಿ ಕರ್ನಾಟಕ ಉಪಚುನಾವಣೆ ಫಲಿತಾಂಶ ಕಾಂಗ್ರೆಸ್ DCM DK Shivakumar 2028 Assembly Elections KPCC Karnataka By-Election Results Congress
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Karnataka By Election Results 2024 LIVE: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಲಭ್ಯKarnataka By Election Results 2024 LIVE: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಲಭ್ಯ
और पढो »
ಈ ರಾಶಿಗಳಿಗೆ ಅದೃಷ್ಟ ಹೊತ್ತು ಬಂದ ದೀಪಾವಳಿ.. ಅಪರೂಪದ ಲಕ್ಷ್ಮೀ ನಾರಾಯಣ ಯೋಗದಿಂದ ಲಕ್ ಜೊತೆ ಲೈಫೂ ಚೇಂಜ್, ತೆರೆಯಲಿದೆ ಭಾಗ್ಯದ ಬಾಗಿಲು.. ಅಷ್ಟದಿಕ್ಕುಗಳಿಂದ ಹರಿದುಬರುವುದು ಸಂಪತ್ತು !Diwali 2024: ದೀಪಾವಳಿಯ ನಂತರ ಈ 5 ರಾಶಿಗಳ ಜನರ ಜೀವನದಲ್ಲಿ ಮಹತ್ತರ ಬದಲಾವಣೆಗಳು ಗೋಚರಿಸಲಿವೆ. ದೀಪಾವಳಿ ಈ ಜನರ ಬಾಳಲ್ಲಿ ಬೆಳಕು ಮೂಡಿಸಲಿದೆ.
और पढो »
ನಾವು ಯಾರ ಅನ್ನವನ್ನು ಕಸಿಯುತ್ತಿಲ್ಲ: ಡಿಸಿಎಂ ಡಿಕೆ ಶಿವಕುಮಾರ್ಬಿಪಿಎಲ್ ಕಾರ್ಡ್ ಪರಿಷ್ಕರಣೆ ಸಂಬಂಧ ಸರ್ಕಾರ ಬಡವರ ಅನ್ನ ಕಸಿಯುತ್ತಿದೆ ಎಂಬ ಟೀಕೆ ಬಗ್ಗೆ ಕೇಳಿದಾಗ, ಬಿಜೆಪಿಯವರಿಗೆ ಬೇರೇನು ಕೆಲಸವಿದೆ. ನಮ್ಮ ಕ್ಷೇತ್ರದಲ್ಲೂ ಶೇ 90 ರಷ್ಟು ಹಾಗೂ ಹೊಳೆನರಸೀಪುರದಲ್ಲಿ ಶೇ 92 ಬಿಪಿಎಲ್ ಕಾರ್ಡುದಾರರಿದ್ದಾರೆ.
और पढो »
ಅಕ್ರಮ ಹಾಗೂ ಕಳಪೆ ಗುಣಮಟ್ಟದ ಕಟ್ಟಡಗಳ ತೆರವು: ಡಿಸಿಎಂ ಡಿಕೆ ಶಿವಕುಮಾರ್ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಜತೆ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿದ ನಂತರ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು.
और पढो »
ದೇಶದ ಗೌರವ ಉಳಿಸಲು ಕೇಂದ್ರ ಸರ್ಕಾರ ಅದಾನಿ ಅವರನ್ನು ಬಂಧಿಸಲಿ: ಡಿಸಿಎಂ ಡಿಕೆ ಶಿವಕುಮಾರ್ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶಿವಕುಮಾರ್ ಅವರು ಶುಕ್ರವಾರ ಮಾತನಾಡಿದರು. “ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಕಳೆದ ಏಳೆಂಟು ವರ್ಷಗಳಿಂದ ನಿರಂತರವಾಗಿ ಅದಾನಿ ಅವರ ಕಂಪನಿಗಳ ಬಗ್ಗೆ ಆರೋಪ ಮಾಡಿ ಜನರ ಗಮನ ಸೆಳೆಯುತ್ತಿದ್ದರು.
और पढो »
ನಾನು, ಸಿದ್ದರಾಮಯ್ಯ ಹಳ್ಳಿಕಾರ ಸಮಾಜದವರು; ನಿಮ್ಮ ಬೇಡಿಕೆ ಈಡೇರಿಕೆಗೆ ಶೀಘ್ರ ಕ್ರಮ : ಡಿಸಿಎಂ ಡಿಕೆ ಶಿವಕುಮಾರ್ನಾನು ಮತ್ತು ಸಿದ್ದರಾಮಯ್ಯ ಇಬ್ಬರೂ ಹಳ್ಳಿಕಾರ ಸಮಾಜದವರು. ನಮ್ಮ ಸರ್ಕಾರ ನಿಮ್ಮ ಜೊತೆಗಿದೆ. ನಿಮ್ಮ ಎಲ್ಲಾ ಬೇಡಿಕೆಗಳ ಬಗ್ಗೆ ಸೂಕ್ತ ಕಾಲದಲ್ಲಿ ಚರ್ಚೆ ನಡೆಸಿ, ಶೀಘ್ರವಾಗಿ ಈಡೇರಿಸಲಾಗುವುದು ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.
और पढो »