ಬೆಂಗಳೂರು: ಸಮಾಜದ ಶ್ರೇಯೋಭಿವೃದ್ಧಿಗಾಗಿ ಉದಾತ್ತ ಚಿಂತನೆಗಳಿಂದ ಜನ್ಮ ತಾಳಿರುವ ರಾಜ್ಯ ಒಕ್ಕಲಿಗರ ಸಂಘ ಇವತ್ತು ಗುಂಪುಗಾರಿಕೆಯಿಂದ ಸೊರಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.
ಕೆಂಪೇಗೌಡ ವೈದ್ಯಕೀಯ ಮಹಾ ವಿದ್ಯಾಲಯ ಕ್ಕೆ ಕೇಂದ್ರ ವೈದ್ಯಕೀಯ ಮಂಡಳಿ ಯಿಂದ ಹೆಚ್ಚುವರಿಯಾಗಿ 100 ಯುಜಿ ಹಾಗೂ 68 ಪಿಜಿ ಸೀಟುಗಳ ಮಂಜೂರು ಮಾಡಿಸಿಕೊಡುವಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ರು, ಕೇಂದ್ರದ ಆರೋಗ್ಯ ಸಚಿವ ಜೆಪಿ ನಡ್ಡಾ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಹೊರಗಡೆ ಸಂಘದ ಬಗ್ಗೆ ಜನ ಲಘುವಾಗಿ ಮಾತನಾಡುವ ಪರಿಸ್ಥಿತಿ ಸೃಷ್ಟಿಯಾಗಿದೆ.
ಹಿಂದೆ ನಮ್ಮ ಒಕ್ಕಲು ಸಮಾಜದ ಪೂರ್ವಿಕರು ಸಂಘ ಕಟ್ಟಲು ಪಟ್ಟ ಶ್ರಮ ಏನು ಎಂಬುದನ್ನು ಈಗಿನ ಆಡಳಿತ ಮಂಡಳಿಯಲ್ಲಿರುವ 35 ಜನ ನಿರ್ದೇಶಕರು ಅರ್ಥ ಮಾಡಿಕೊಳ್ಳಬೇಕು. ಬೆಂದ ಮನೆಯಲ್ಲಿ ಗಳ ಇರಿಯುವಂತಹ ಜನರು ಕೂಡ ಸಂಘದಲ್ಲಿ ಸೇರಿಕೊಂಡಿದ್ದಾರೆ. ಸಂಘಕ್ಕೆ, ಒಕ್ಕಲಿಗ ಸಮಾಜಕ್ಕೆ ಕಿಂಚಿತ್ತು ಒಳ್ಳೆಯದು ಮಾಡಬೇಕು ಎಂಬ ಹಂಬಲ ಹೊಂದಿರುವ ಕೆಲವರು ಕೂಡ ಈ ಸಂಘದಲ್ಲಿ ಇದ್ದಾರೆ. ಆದರೆ, ಸಂಘಕ್ಕೆ ಬಂದರೆ ಸಮಾಜಕ್ಕೆ ಒಳ್ಳೆಯದು ಮಾಡುವ ಬದಲು ಒಂದಷ್ಟು ಸಂಪಾದನೆ ಮಾಡಿಕೊಂಡು ಹೋಗೋಣ ಎಂದು ಸ್ವಾರ್ಥಿಗಳಾಗಿ ಆಲೋಚನೆ ಮಾಡುವ ವ್ಯಕ್ತಿಗಳಿಂದ ಸಮಾಜಕ್ಕೆ ಏನು ಉಪಯೋಗ ಎಂದು ಕೇಂದ್ರ ಸಚಿವರು ಬೇಸರ ವ್ಯಕ್ತಪಡಿಸಿದರು.
ಕೆ.ಹೆಚ್.ರಾಮಯ್ಯ ಅವರಂಥ ಮಹಾನುಭಾವರು ಸಂಘಕ್ಕೆ ಬುನಾದಿ ಹಾಕಿದರು. ಅನೇಕ ಮಹಾಪುರುಷರು ಸಂಘ ಬೆಳೆಸುತ್ತಾ ಹೋದರು. ಮರೀಗೌಡರು, ಗುತ್ತಲಗೌಡರು ಸಂಘಕ್ಕೆ ಸಂಬಂಧಿಸಿದ ಕೆಲಸಗಳನ್ನು ಮಾಡಿಸಿಕೊಳ್ಳಲು ಕಂಕುಳಲ್ಲಿ ಫೈಲ್ ಗಳನ್ನು ಹಿಡಿದುಕೊಂಡು ಅಲೆಯುತ್ತಿದ್ದ ದಿನಗಳನ್ನು ನಾನು ನೋಡಿದ್ದೇನೆ. ಅವರಿಬ್ಬರೂ ನಮ್ಮ ತಂದೆಯವರ ಬಳಿಗೆ ಬಂದು ಸಂಘದ ಬಗ್ಗೆ ಚರ್ಚೆ ಮಾಡುತ್ತಿದ್ದನ್ನು ನಾನು ಕಂಡಿದ್ದೇನೆ. ಅಂತಹ ಮಹನೀಯರ ತ್ಯಾಗ, ಬದ್ಧತೆಯ ಬಗ್ಗೆ ಈಗಿನ ಎಲ್ಲಾ ನಿರ್ದೇಶಕರು ಆತ್ಮಾವಲೋಕನ ಮಾಡಿಕೊಳ್ಳಬೇಕು, ನಿಮ್ಮನ್ನು ನೀವು ಪ್ರಶ್ನೆ ಮಾಡಿಕೊಳ್ಳಿ.
ಬೇರೆ ಸಮಾಜಗಳ ಸಂಘಗಳು ಹೇಗೆ ಕೆಲಸ ಮಾಡುತ್ತಿವೆ ಎಂಬುದನ್ನು ನೋಡಿ, 35 ನಿರ್ದೇಶಕರು ಇದ್ದೀರಿ, ನಿಸ್ವಾರ್ಥವಾಗಿ ಕೆಲಸ ಮಾಡಿ. ನೀವು ಸರಿಯಾಗಿ ಕೆಲಸ ಮಾಡಿದ್ದಿದ್ದರೆ ಸಂಘ ನಂಬರ್ ವನ್ ಆಗುತ್ತಿತ್ತು. ಆದರೆ, ಇಲ್ಲಿ ಏನೇನು ನಡೆಯುತ್ತಿದೆ ಎನ್ನುವುದು ನನಗೆ ಗೊತ್ತಿದೆ. ಮೊದಲು ಗುಂಪುಗಾರಿಕೆ ಬಿಡಿ, ಒಂದು ಕುಟುಂಬದ ರೀತಿಯಲ್ಲಿ ಕೆಲಸ ಮಾಡಿ ಎಂದು ಕಿವಿಮಾತು ಹೇಳಿದರು.ಕಿಮ್ಸ್ ಆಸ್ಪತ್ರೆಯಲ್ಲಿ ಒಳ್ಳೆಯ ತಜ್ಞ ವೈದ್ಯರು ಇದ್ದೀರಿ.
ಹೆಚ್ ಡಿ ದೇವೇಗೌಡ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್ ಕೆಂಪೇಗೌಡ ವೈದ್ಯಕೀಯ ಮಹಾ ವಿದ್ಯಾಲಯ ಕೇಂದ್ರ ವೈದ್ಯಕೀಯ ಮಂಡಳಿ ಕರ್ನಾಟಕ ಸುದ್ದಿ ಕರ್ನಾಟಕ ರಾಜ್ಯ ಸುದ್ದಿ HD Kumaraswamy HD Deve Gowda Union Minister For Heavy Industries And Steel H.D Kempegowda Medical College Central Medical Council Karnataka News Karnataka State News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಹೆಚ್ಎಂಟಿ ಜಾಗಕ್ಕೆ ಸಚಿವ ಈಶ್ವರ ಖಂಡ್ರೆ ಅತಿಕ್ರಮ ಪ್ರವೇಶ; ಹೆಚ್.ಡಿ.ಕುಮಾರಸ್ವಾಮಿ ಕಿಡಿಈ ಬಗ್ಗೆ ನಾಳೆ ಅಥವಾ ನಾಡಿದ್ದು ಎಲ್ಲಾ ದಾಖಲೆಗಳ ಸಮೇತ ನಾನು ನಿಮ್ಮ (ಮಾಧ್ಯಮಗಳು) ಮುಂದೆ ಮಾತನಾಡುತ್ತೇನೆ ಎಂದರು.
और पढो »
ವೆಂಟಿಲೇಟರ್ ಇಲ್ಲ, ನನ್ನ ಕೈ ಕೂಡ ನಡುಗುತ್ತಿಲ್ಲ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಗುಡುಗುಚನ್ನಪಟ್ಟಣ ಉಪಚುನಾವಣೆಯಲ್ಲಿ ಮೊಮ್ಮಗ ನಿಖಿಲ್ ಪರವಾಗಿ ಮತಯಾಚನೆ ಮಾಡಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು, ಪರೋಕ್ಷವಾಗಿ ಸಿಪಿ ಯೋಗೇಶ್ವರ್ ವಿರುದ್ಧ ಆಕ್ರೋಶ ಹೊರಹಾಕಿ ಪಕ್ಷಾಂತರ ಮಾಡಿದ ಅವರನ್ನು ಕನ್ವರ್ಟಡ್ ಕಾಂಗ್ರೆಸ್ ಜೆಂಟಲ್‌ಮೆನ್ ಎಂದು ಟೀಕಿಸಿದರು.
और पढो »
ಕುಮಾರಸ್ವಾಮಿ ಚದುರಂಗದಾಟದಿಂದ ಚನ್ನಪಟ್ಣಣದಲ್ಲಿ ನಿಖಿಲ್‌ಗೆ ಟಿಕೆಟ್: ಡಿ.ಕೆ.ಸುರೇಶ್HD Kumaraswamy: ನಿಖಿಲ್ ಅವರಿಗೆ ಚನ್ನಪಟ್ಟಣ ಟಿಕೆಟ್ ಸಿಗುವಂತೆ ಮಾಡಲು ಕುಮಾರಸ್ವಾಮಿ ಅವರು ಚದುರಂಗದಾಟ ಸೃಷ್ಟಿಸಿದರು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿಳಿಸಿದರು.
और पढो »
ಡಿಜೆ ಹಳ್ಳಿ, ಕೆಜೆ ಹಳ್ಳಿ ಕೇಸ್ ಹಿಂಪಡೆಯಲು ರಾಜ್ಯ ಸರ್ಕಾರ ಸಿದ್ಧತೆ: ಪ್ರಲ್ಹಾದ ಜೋಶಿ ಗಂಭೀರ ಆರೋಪPralhad Joshi: ರಾಜ್ಯ ಕಾಂಗ್ರೆಸ್ ಸರ್ಕಾರ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲೂ ಗಲಭೆ ಕೋರರ ಮೇಲಿನ ಕೇಸ್ ಹಿಂಪಡೆಯಲು ಸಿದ್ಧತೆ ನಡೆಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗಂಭೀರ ಆರೋಪ ಮಾಡಿದರು.
और पढो »
ಹಾಡಿದ್ದೇ ಹಾಡೋ ಕಿಸುಬಾಯಿ ದಾಸ ಗಾದೆ ಮಾತಿನಂತಿದೆ ಸಿಎಂ ಆಪಾದನೆ: ಪ್ರಲ್ಹಾದ ಜೋಶಿ ಟಾಂಗ್Pralhad Joshi: ಅನುದಾನ ಹಂಚಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪಾದನೆ ಹಾಡಿದ್ದೇ ಹಾಡೋ ಕಿಸಬಾಯಿ ದಾಸ ಎಂಬ ಗಾದೆ ಮಾತಿನಂತಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು ನೀಡಿದ್ದಾರೆ.
और पढो »
ಸತೀಶ್ ಸೈಲ್ ಶಾಸಕತ್ವ ವಜಾಗೊಳಿಸಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಕಾಂಗ್ರೆಸ್ ನಾಯಕರು ಕಳ್ಳ ಕಾಕರ ಪರ ನಿಂತಿದ್ದಾರೆ. ಅಂತೆಯೇ ಶಾಸಕ ಸತೀಶ್ ಸೈಲ್ ಅವರನ್ನು ಸಮರ್ಥಿಸಿಕೊಂಡಿದ್ದರು. ಕಳ್ಳರು, ವಂಚಕರನ್ನು ಕಾಂಗ್ರೆಸ್ ನವರು ಹೇಗೆ ಸಮರ್ಥಿಸಿಕೊಳ್ಳುತ್ತಾರೆ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಎಂದು ಹೇಳಿದರು.
और पढो »