ಲೋಕಾಯುಕ್ತ ವಿಶೇಷ ತನಿಖಾ ದಳದ ಐಜಿಪಿ ಎಂ.ಚಂದ್ರಶೇಖರ್ ಆ ಭ್ರಷ್ಟ ಅಧಿಕಾರಿ ಆಗಿದ್ದು, ಇಂಥ ದರೋಡೆಕೋರ ಅಧಿಕಾರಿಗಳನ್ನು ಇಟ್ಟುಕೊಂಡು ರಾಜ್ಯ ಸರ್ಕಾರ ತನಿಖೆ ಮಾಡಿಸುತ್ತಿದೆ ಎಂದು ಸಚಿವರು ಗಂಭೀರ ಆರೋಪ ಮಾಡಿದರು.
ರಾಜ್ಯಪಾಲರ ಕಚೇರಿ ಅಧಿಕಾರಿಗಳ ಸಿಬ್ಬಂದಿ ತನಿಖೆಗೆ ಅನುಮತಿ ಕೋರಿದ್ದ ಐಜಿಪಿ ಬಗ್ಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕಿಡಿ
ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಯಾವ ತನಿಖೆಯೂ ಪಾರದರ್ಶಕವಾಗಿ ನಡೆಯುತ್ತಿಲ್ಲ. ರಾಜಕೀಯ ಸೇಡಿಗಾಗಿ ತನಿಖೆ ನಡೆಸಲಾಗುತ್ತಿದೆ. ಅದಕ್ಕೆ ಚಂದ್ರಶೇಖರ್ ಅವರಂಥ ಕಳಂಕಿತ ಅಧಿಕಾರಿಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಈ ಅಧಿಕಾರಿಯ ವಿರುದ್ಧ ಕೇಂದ್ರ ಗೃಹ ಸಚಿವಾಲಯಕ್ಕೆ ದೂರು ನೀಡಲಾಗುವುದು ಎಂದು ಕುಮಾರಸ್ವಾಮಿ ಅವರು ಹೇಳಿದರು. ಪತ್ರ ಸೋರಿಕೆ ಬಗ್ಗೆ ರಾಜ್ಯಪಾಲರ ಸಿಬ್ಬಂದಿ ವಿಚಾರಣೆಗೆ ಚಂದ್ರಶೇಖರ್ ಪತ್ರ ಬರೆದು ಉದ್ದಟತನ ತೋರಿಸಿದ್ದಾರೆ. ರಾಜ್ಯಪಾಲರ ಕಚೇರಿ ಪರಿಶೀಲನೆ ಮಾಡುತ್ತೇನೆ ಎಂದು ಚಂದ್ರಶೇಖರ್ ಕೇಳುತ್ತಾರೆ ಎಂದರೆ ಆತನಿಗೆ ಎಷ್ಟು ಉದ್ದಟತನ ಇರಬೇಕು? ರಾಜ್ಯಪಾಲರ ಕಚೇರಿ ಸರ್ಚ್ ಮಾಡುವ ಸೂಪರ್ ಕಾಪ್ ಯಾರಿರಬೇಕು ಎಂದು ಕೆದಕಿದರೆ ಇವರ ಹಿನ್ನಲೆ ಗೊತ್ತಾಯಿತು ನನಗೆ ಎಂದು ಚಂದ್ರಶೇಖರ್ ಹಿನ್ನೆಲೆಯನ್ನು ಬಿಡಿಸಿಟ್ಟರು ಕುಮಾರಸ್ವಾಮಿ ಅವರು.
ಐಜಿಪಿ ಚಂದ್ರಶೇಖರ್ ವಿರುದ್ಧ ಹಲವಾರು ದೂರುಗಳು ದಾಖಲಾಗಿ, ಆರೋಪ ಪಟ್ಟಿಗಳು ಸಲ್ಲಿಕೆಯಾಗಿವೆ. ಈ ವ್ಯಕ್ತಿ ಸರಣಿ ಅಪರಾಧಗಳನ್ನು ಮಾಡಿರುವ ಅಧಿಕಾರಿ. ತಮ್ಮ ಅಧೀನದಲ್ಲಿದ್ದ ಅಧಿಕಾರಿಯಿಂದ ಭೂಮಿ ವ್ಯವಹಾರಕ್ಕೆ ಸಂಬಂಧಿಸಿ ₹20 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಇನ್ಸ್ಪೆಕ್ಟರ್ ಒಬ್ಬರು ದೂರು ನೀಡಿದ್ದು, ಆ ದಾಖಲೆಯನ್ನು ಕೂಡ ಕೇಂದ್ರ ಸಚಿವರು ಓದಿ ಹೇಳಿದರು. ಮಾಧ್ಯಮಗೋಷ್ಟಿಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಮಾಜಿ ಶಾಸಕ ಅಶ್ವಿನ್ ಕುಮಾರ್, ಮಂಜುನಾಥ್, ಪಕ್ಷದ ಹಿರಿಯ ನಾಯಕರಾದ ಜಪ್ರುಲ್ಲಾ ಖಾನ್, ಸುಧಾಕರ ಶೆಟ್ಟಿ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.
ಲೋಕಾಯುಕ್ತ ವಿಶೇಷ ತನಿಖಾ ದಳ ಐಜಿಪಿ ಚಂದ್ರಶೇಖರ್ ಸಿದ್ದರಾಮಯ್ಯ ಸರ್ಕಾರ ಕೇಂದ್ರ ಗೃಹ ಸಚಿವಾಲಯ HD Kumaraswamy Lokayukta Special Investigation Team IGP Chandrasekhar Siddaramaiah Government Union Home Ministry
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ನನಗೆ ನೋಟಿಸ್ ಬಂದಿಲ್ಲ, ಸ್ವಇಚ್ಛೆಯಿಂದ ಬಂದಿದ್ದೇನೆ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಬೆಂಗಳೂರು: ನಾನು ಸ್ವಇಚ್ಛೆಯಿಂದ ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾಗಿದ್ದೇನೆ. ನನಗೆ ಯಾವ ನೋಟಿಸ್ ಕೂಡ ಬಂದಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.
और पढो »
ಬಿಲಾಯ್ ಉಕ್ಕು ಕಾರ್ಖಾನೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ :13,000 ಎಕರೆಗೂ ಹೆಚ್ಚು ವಿಸ್ತೀರ್ಣದಲ್ಲಿರುವ ಸ್ಥಾವರದಲ್ಲಿ ಸಚಿವರ ಸಂಚಾರಛತ್ತೀಸಗಢದ ಬಿಲಾಯ್ ಉಕ್ಕು ಕಾರ್ಖಾನೆಗೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಕಾರ್ಖಾನೆಯ ವಿವಿಧ ವಿಭಾಗಗಳ ಕಾರ್ಯ ವೈಖರಿಯನ್ನು ಪರಿಶೀಲಿಸಿದರು.
और पढो »
ಗಲಭೆ ಪೀಡಿತ ನಾಗಮಂಗಲಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನಾಳೆ ಭೇಟಿನವದೆಹಲಿ: ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಗಲಾಟೆ ನಡೆದಿದ್ದು, ಪೊಲೀಸರು ಕ್ರಮ ಕೈಗೊಂಡು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಇದೀಗ ಗಲಭೆ ಪೀಡಿತ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಶುಕ್ರವಾರ ಬೆಳಗ್ಗೆ ಭೇಟಿ ನೀಡಲಿದ್ದಾರೆ.
और पढो »
ʼಬ್ರದರ್ʼಗಳ ಹಿನ್ನೆಲೆ ಜಗತ್ತಿಗೇ ಗೊತ್ತಿದೆ : ಡಿ.ಕೆ.ಸುರೇಶ್‌ಗೆ ತಿರುಗೇಟು ಕೊಟ್ಟ ಹೆಚ್‌ಡಿಕೆಅಣ್ಣ - ತಮ್ಮಂದಿರು ಯಾವ ಮಾರ್ಗದಲ್ಲಿ ಬಂದಿದ್ದಾರೆ. ಯಾರಿಗೆ ಹೇಗೆಲ್ಲಾ ಧಮ್ಕಿ ಹಾಕಿದ್ದಾರೆ. ಯಾರ ಯಾರ ಆಸ್ತಿಗಳನ್ನು ಲಪಟಾಯಿಸಿ ಲೂಟಿ ಮೂಡಿದ್ದಾರೆ, ಇದೆಲ್ಲವೂ ಜನರಿಗೆ ಗೊತ್ತಿದೆ. ಅಂತವರ ಬಗ್ಗೆ ನಾನು ಹೇಳಿಕೆ ಕೊಡಬೇಕಾ? ಎಂದು ಡಿ.ಕೆ. ಸುರೇಶ್ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗುಡುಗಿದರು.
और पढो »
ನನ್ನ ವಿರುದ್ಧ ಯಾವ ಬಿಡಾಡಿಗಳು ಏನೂ ಮಾಡಲು ಆಗಲ್ಲ; ಕಾಲಭೈರವೇಶ್ವರನ ಸನ್ನಿಧಿಯಲ್ಲಿ ಹೇಳುತ್ತಿದೇನೆ: ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಆಕ್ರೋಶಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಹೈಕೋರ್ಟ್ ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟ ನಂತರ ಅವರು ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು.
और पढो »
ಆಟೋ ಬಿಡಿಭಾಗ; ಸ್ವಾವಲಂಬನೆ ಸಾಧಿಸಲು ಉದ್ಯಮಕ್ಕೆ ಸಲಹೆ ನೀಡಿದ ಹೆಚ್.ಡಿ.ಕುಮಾರಸ್ವಾಮಿಜಾಗತಿಕ ಮಟ್ಟದಲ್ಲಿ ದೇಶೀಯ ಆಟೋ ಬಿಡಿಭಾಗ ಉದ್ಯಮ ಅನೇಕ ಸವಾಲುಗಳನ್ನು ಎದುರಿಸುತ್ತಿದೆ.ಅಲ್ಲದೆ,ದುಬಾರಿ ಸಾರಿಗೆ, ವೆಚ್ಚಗಳ ಒತ್ತಡಕ್ಕೆ ಸಿಲುಕಿದೆ.
और पढो »