ನನ್ನ ಗುರುಗಳು ನನಗೆ ಒಂದು ಮಾತು ಹೇಳಿಕೊಟ್ಟಿದ್ದಾರೆ. ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದ ವಿಶ್ವಕ್ಕೆ ಶಾಂತಿ ನೆಲೆಸಲಿ ಎಂದು ಹೇಳಿದ್ದಾರೆ. ನಾವು ಬಡವರಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ. ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು.
ಈ ಡಿ.ಕೆ ಶಿವಕುಮಾರ್ ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಬಂಡೆಯಂತೆ ನಿಲ್ಲುವುದಾಗಿ ಮೈಸೂರಿನಲ್ಲಿ ಹೇಳಿದ್ದೇನೆ. ಈಗಲೂ ಇದ್ದೇನೆ, ನಾಳೆಯೂ ಇರುತ್ತೇನೆ. ಸಾಯುವವರೆಗೂ ಇರುತ್ತೇನೆ. ಇದು ಈ ಕನಕಪುರದ ಬಂಡೆಯ ಇತಿಹಾಸ. ನಾನು ಎಲ್ಲಿ ಕೆಲಸ ಮಾಡುತ್ತೇನೋ ಅಲ್ಲಿ ಪ್ರಾಮಾಣಿಕತೆಯಿಂದ ಕೆಲಸ ಮಾಡುವುದು ನನ್ನ ಕರ್ತವ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗಗಳು ಅದಿಕಾರಕ್ಕೆ ಬಂದಂತೆ.ಕರ್ನಾಟಕದ ಈ ನಗರದಲ್ಲಿದೆ ಚಾಣಕ್ಯ ಬರೆದ 'ಅರ್ಥಶಾಸ್ತ್ರ'ದ ಮೂಲ ಪ್ರತಿ..
“ಮೊದಲು ಹಾಸನಾಂಬೆ ತಾಯಿಯ ಪಾದಗಳಿಗೆ ಸಾಷ್ಟಾಂಗ ನಮನಗಳು. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗಗಳು ಅದಿಕಾರಕ್ಕೆ ಬಂದಂತೆ. 25 ವರ್ಷಗಳ ನಂತರ ಹಾಸನದ ಮಹಾಜನತೆ ಕಾಂಗ್ರೆಸಿಗನನ್ನು ಆರಿಸಿ ಸಂಸತ್ತಿಗೆ ಕಳಿಸಿದ್ದೀರಿ. ಈ ಭಾಗದ ಧ್ವನಿಯಾಗಲು, ನೊಂದ ತಾಯಂದಿರಿಗೆ ರಕ್ಷಣೆ ನೀಡಲು ಶ್ರೇಯಸ್ ಪಟೇಲ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ನಿಮಗೆ ನಮನಗಳು.
ರಾಮನಗರದಲ್ಲಿ ನಾಲ್ಕಕ್ಕೆ ನಾಲ್ಕು, ಮಂಡ್ಯದಲ್ಲಿ ಆರು, ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಮಗಳೂರಿನಲ್ಲಿ ನಾವು ಹೆಚ್ಚು ಕ್ಷೇತ್ರ ಗೆದ್ದಿದ್ದು, ಮುಂದೆ ಹಾಸನದಲ್ಲೂ ಹೆಚ್ಚು ಕ್ಷೇತ್ರಗಳನ್ನು ಗೆದ್ದೇ ಗೆಲ್ಲುತ್ತೀವಿ ಎಂಬ ಆತ್ಮವಿಶ್ವಾಸವಿದೆ. ಇದಕ್ಕೆ ನೀವು ಸಹಕಾರ ನೀಡಬೇಕು. ಚುನಾವಣೆ ಸಮಯದಲ್ಲಿ ಚನ್ನಪಟ್ಟಣಕ್ಕೆ ಬಂದು ಕಣ್ಣೀರು ಹಾಕುವ ಕುಮಾರಸ್ವಾಮಿ ಅವರೇ ನಿಮ್ಮ ಸಾಕ್ಷಿ ಗುಡ್ಡೆ ಏನು? ಹಾಸನದಲ್ಲಿ ದೇವೇಗೌಡರ ಕುಟುಂಬದ ಸಾಕ್ಷಿ ಗುಡ್ಡೆ ಏನು? ನಾನು ನಿಮ್ಮ ಕುಟುಂಬದ ಮಾಜಿ ಸಂಸದರ ಸಾಕ್ಷಿ ಗುಡ್ಡೆ ಬಗ್ಗೆ ಮಾತನಾಡುವುದಿಲ್ಲ. ಅದರ ಬಗ್ಗೆ ಮಾತನಾಡಲು ನನಗೆ ಅಸಹ್ಯವಾಗುತ್ತದೆ.
ಕುಮಾರಸ್ವಾಮಿ, ದೇವೇಗೌಡರು ಉಪಚುನಾವಣೆ ಸಮಯದಲ್ಲಿ ಈ ಸರ್ಕಾರವನ್ನು ಆರು ತಿಂಗಳಲ್ಲಿ ಕಿತ್ತೊಗೆಯುತ್ತೇವೆ ಎಂದು ಹೇಳಿದರು. ದೇವೇಗೌಡರೇ ಕಿತ್ತುಹಾಕಲು ನಮ್ಮ ಸರ್ಕಾರ ಹಾಸನದಲ್ಲಿ ಬೆಳೆಯುವ ಆಲೂಗಡ್ಡೆ ಗಿಡವಲ್ಲ. 138 ಶಾಸಕರ ಜನಬೆಂಬಲವಿರುವ ಸರ್ಕಾರ ಇದು. ಇದನ್ನು ಕಿತ್ತುಹಾಕಲು ನಿಮ್ಮ ಹಣೆಯಲ್ಲಿ ಬರೆದಿಲ್ಲ. 2028ಕ್ಕೆ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿದೆ. ಪ್ರತಿಯೊಬ್ಬರ ಜನರ ಬದುಕಿನಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳು ಪರಿಣಾಮ ಬೀರಿವೆ. ನಮ್ಮ ಮಾದರಿಯನ್ನು ಬಿಜೆಪಿಯು ಬೇರೆ ಬೇರೆ ರಾಜ್ಯಗಳಲ್ಲಿ ನಕಲು ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಯಾವುದೇ ಕಾರ್ಯಕ್ರಮ ಕೊಟ್ಟರೂ ಅದನ್ನು ನಾವು ಉಳಿಸಿಕೊಂಡು ಬರುತ್ತಿದ್ದೇವೆ. ಇಂದಿರಾ ಗಾಂಧಿ ಅವರ ಕಾಲದಿಂದ ಮನಮೋಹನ್ ಸಿಂಗ್ ಅವರ ಕಾಲದವರೆಗೂ ನಾವು ಶಾಸನಬದ್ಧ ಕಾರ್ಯಕ್ರಮ ನೀಡುತ್ತಾ ಬಂದಿದೆ.ಅಂಬೇಡ್ಕರ್ ಅವರು ನಮ್ಮ ದೊಡ್ಡ ಶಕ್ತಿ. ದೇಶದಲ್ಲಿ ಅತಿ ಹೆಚ್ಚು ಪ್ರತಿಮೆ ಇರುವುದು ಅಂಬೇಡ್ಕರ್ ಅವರದ್ದು ಮಾತ್ರ.
CM Siddaramaiah Karnataka Polirtcs Zee Kannada News Congress ಸಿಎಂ ಸಿದ್ದರಾಮಯ್ಯ.ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಜೀ ಕನ್ನಡ ನ್ಯೂಸ್
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಎಕ್ಸಿಟ್ ಪೋಲ್ ಗಳು ತಲೆಕೆಳಗಾಗುತ್ತವೆ.. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸನಿಮ್ಮ ಎಕ್ಸಿಟ್ ಪೋಲ್ ಫಲಿತಾಂಶಗಳೆಲ್ಲಾ ತಲೆಕೆಳಗಾಗುತ್ತವೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
और पढो »
ಶ್ರೀವೈಷ್ಣವರನ್ನು ಕರ್ನಾಟಕದ ಜಾತಿಪಟ್ಟಿಗೆ ಸೇರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್ಧರ್ಮ ಯಾವುದಾದರೂ ತತ್ವ ಒಂದೇ. ನಾಮ ನೂರಾದರೂ ದೈವ ಒಂದೇ. ಪೂಜೆ ಯಾವುದಾದರೂ ಭಕ್ತಿ ಒಂದೆ. ಕರ್ಮ ಯಾವುದಾದರೂ ನಿಷ್ಠೆ ಒಂದೆ. ದೇವನೊಬ್ಬ ನಾಮ ಹಲವು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
और पढो »
Bandipura Forest: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪರಿಸರವಾದಿಗಳ ಆಕ್ಷೇಪಸುಪ್ರೀಂಕೋರ್ಟ್ ಆದೇಶವಿದ್ದು, ಯಾರೂ ಏನು ಮಾಡಲಾಗಲ್ಲ. ಡಿ.ಕೆ.ಶಿವಕುಮಾರ್ ಹೇಳಿಕೆ ಕೊಟ್ಟರೂ, ಸರ್ಕಾರ ಪತ್ರ ಬರೆದರೂ ಯಾರೂ ತಲೆ ಕೆಡಿಕೊಳ್ಳಬೇಕಿಲ್ಲ, ಹೆದರಬೇಕಿಲ್ಲ ಎಂದು ಪರಿಸರ ಹೋರಾಟಗಾರ ಜೋಸೆಫ್ ಹೂವರ್ ಕಿಡಿಕಾರಿದ್ದಾರೆ.
और पढो »
ನಮ್ಮ ವಂಶಕ್ಕೆ ಕಣ್ಣೀರು ಬಳುವಳಿಯಾಗಿ ಬಂದಿದೆ: ಡಿ.ಕೆ.ಶಿವಕುಮಾರ್ ವಿರುದ್ಧ ಎಚ್.ಡಿ.ದೇವೇಗೌಡ ಆಕ್ರೋಶ!ನಮಗೆ ರೈತರ, ಬಡ ಜನರ ಕಷ್ಟ ಸುಖಗಳ ಅರಿವಿದೆ. ಅವರ ಕಷ್ಟಕ್ಕೆ ಸ್ಪಂದಿಸುವ ಹೃದಯ ಯಾರಿಗಿರುತ್ತೋ ಅವರಿಗೆ ಮಾತೃ ಹೃದಯ ಇರುತ್ತದೆ. ಕಣ್ಣೀರಿನ ಬಗ್ಗೆ ವ್ಯಂಗ್ಯ ಮಾಡುವ ಜನರಿಗೆ ನಾನು ಇನ್ನೇನು ಹೇಳಲು ಬಯಸುವುದಿಲ್ಲ ಎಂದು ದೇವೇಗೌಡ ಹೇಳಿದರು.
और पढो »
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇ.ಡಿ ಬಗ್ಗೆ ಗೌರವದಿಂದ ನಡೆದುಕೊಳ್ಳಬೇಕು : ಯಡಿಯೂರಪ್ಪಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇ.ಡಿ ಬಗ್ಗೆ ಗೌರವದಿಂದ ನಡೆದುಕೊಳ್ಳಬೇಕು ಎಂದು ಮಾಜಿ ಸಿ ಎಂ ಯಡಿಯೂರಪ್ಪ ಕಿವಿ ಮಾತು ಹೇಳಿದ್ದಾರೆ.
और पढो »
ಬಲ ಪ್ರದರ್ಶನ ಅಗತ್ಯವಿಲ್ಲ! ನಮ್ಮ ಆಚಾರ ವಿಚಾರ ಜನರಿಗೆ ತಲುಪಿಸಿದರೆ ಬಿಜೆಪಿ, ಜೆಡಿಎಸ್ ಗ್ಯಾಕೆ ಹೊಟ್ಟೆಯುರಿ: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆಬಿಜೆಪಿ ಹಾಗೂ ಜೆಡಿಎಸ್ ತಮ್ಮ ನೆಲೆ ಕಳೆದುಕೊಳ್ಳುತ್ತಿದ್ದು, ಸಂಕಟದಿಂದ ನಮ್ಮ ಕಾರ್ಯಕ್ರಮವನ್ನು ಟೀಕಿಸುತ್ತಿವೆ” ಎಂದು ಡಿಕೆ ಶಿವಕುಮಾರ್ ತಿಳಿಸಿದರು.
और पढो »